ಈ ಚಳುವಳಿ ತಪ್ಪಿಸಿದ್ರೆ ಸರ್ಕಾರಕ್ಕೆ ಅನಾಹುತ; ರೈತ ಮುಖಂಡನ ಎಚ್ಚರಿಕೆ | Belagavi Sugarcane Farmers Protest
ಕಬ್ಬು ಬೆಳೆಗಾರರ ಪ್ರತಿಭಟನೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದ್ದು, ಗುರ್ಲಾಪುರದಿಂದ ಹಿಂಡಲಗಾ ಜೈಲಿನತ್ತ ರೈತ ಯಾತ್ರೆ ಮುಂದುವರಿದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಪನಾಳ ಗ್ರಾಮಕ್ಕೆ ತಲುಪಿದ ಯಾತ್ರೆಯಲ್ಲಿ ರೈತ ಮುಖಂಡರಾದ ಚೂನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರುಜಿ ಎತ್ತಿನ ಬಂಡಿಯಲ್ಲಿ ಮೆರವಣಿಗೆ ನಡೆಸಿದ್ದು, ಸಾವಿರಾರು ರೈತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.
